ಮೊರ್ಬಿ ಸೇತುವೆ ದುರಂತ: ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್‌ನ ಮೊರ್ಬಿ ಸೇತುವೆ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಈ ಕುರಿತು ಗಾಂಧಿನಗರದ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಿ, ಸಿಎಂ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು.

ಮೋರ್ಬಿಯಲ್ಲಿ ದುರ್ಘಟನೆ ನಡೆದಾಗಿನಿಂದ ನಡೆಯುತ್ತಿರುವ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತು ಮೋದಿಯವರು ಮಾಹಿತಿ ಪಡೆದರು. ಇಲ್ಲಿಯವರೆಗೆ ದುರಂತಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಚರ್ಚಿಸಲಾಗಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ಸಿಗುವಂತೆ ನೋಡಿಕೊಳ್ಳಲು ಪ್ರಧಾನಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದುರಂತಕ್ಕೆ ಕಾರಣ, ಲೋಪಗಳ ಕುರಿತು ಮೋದಿ ಪ್ರಶ್ನಿಸಿದ್ದಾರೆ.

ಇಂದು ಮುಂಜಾನೆಯೇ ಮೊರ್ಬಿಯಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್, ಗೃಹ ಸಚಿವ ಹರ್ಷ ಸಂಘವಿ, ಗುಜರಾತ್‌ನ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು (ಜಿಡಿಪಿ) ರಾಜ್ಯ ಮತ್ತು ಗುಜರಾತ್‌ ಗೃಹ ಇಲಾಖೆ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!