ಮೊರ್ಬಿ ತೂಗು ಸೇತುವೆ ಕುಸಿತ: ಗಾಯಗೊಂಡವರ ಅರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತಿನ ಮೊರ್ಬಿ ತೂಗು ಸೇತುವೆ ಕುಸಿತದಲ್ಲಿ ಗಾಯಗೊಂಡು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಇನ್ನು ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಜೊತೆ ಸೇತುವೆ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ನೀಡಲು ಪ್ರಧಾನಿ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!