ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊರ್ಬಿ ತೂಗು ಸೇತುವೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಗುಜರಾತ್ ಸರ್ಕಾರ ಘೋಷಿಸಿದೆ.
ದುರಂತದಲ್ಲಿ135 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರಕಾರ , ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ ಮೊತ್ತ ಹೆಚ್ಚಿಸಿದೆ. ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ.
ಮೊರ್ಬಿ ಘಟನೆ ಕುರಿತು ಗುಜರಾತ್ ಹೈಕೋರ್ಟ್ ವಿಚಾರಣೆ ನಡಿಸಿ, ಸರ್ಕಾರವನ್ನು ತರಾಟಗೆ ತೆಗೆದುಕೊಂಡಿತ್ತು. ಇಷ್ಟೇ ಅಲ್ಲ ವಾರದೊಳಗೆ ವರದಿ ನೀಡುವಂತೆ ಸೂಚಿಸಿತ್ತು. ಇದೀಗ ಗುಜರಾತ್ ಸರ್ಕಾರ ಒಟ್ಟು ಮೊತ್ತವನ್ನು ಹೆಚ್ಚಿಸಿದೆ. ಇಷ್ಟೇ ಅಲ್ಲ ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದೆ.
ಈ ಹಿಂದೆ ಮೊರ್ಬಿ ಸೇತುವೆ ದುರಂತದ ಬೆನ್ನಲ್ಲೇ ಸರ್ಕಾರ ಮಡಿದವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಘೋಷಿಸಿತ್ತು. ಇನ್ನು ಕೇಂದ್ರ ಸರ್ಕಾರ ತಲಾ 2 ಲಕ್ಷ ರೂಪಾಯಿ ಘೋಷಿಸಿತ್ತು. ಇನ್ನು ಗಾಯಗೊಂಡವರಿಗೆ ರಾಜ್ಯ ಸರ್ಕಾರ 50,000 ರೂಪಾಯಿ ಹಾಗೂ ಕೇಂದ್ರ ಸರ್ಕಾರ 50,000 ರೂಪಾಯಿ ಘೋಷಿಸಿತ್ತು. ಇದೀಗ ಮಡಿದ ಕುಟುಂಬಕ್ಕೆ ಒಟ್ಟು 10 ರೂಪಾಯಿ ಪರಿಹಾರ ಸಿಗಲಿದೆ. ಇನ್ನು ಗಾಯಗೊಂಡವರಿ 2 ರಿಂದ 3 ಲಕ್ಷ ರೂಪಾಯಿ ಹರಿಹಾರ ಸಿಗಲಿದೆ.