ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, 28ಆರೋಗ್ಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ವೈದ್ಯಕೀಯ ಕೇಂದ್ರಗಳ ನಿರ್ವಹಣೆಗೆ 125ಕೋಟಿ ಹಣ ಮೀಸಲಿಡಲಾಗಿದೆ. ಅಗತ್ಯ ವೈದ್ಯಕೀಯ ಉಪಕರಣಗಳ ಖರೀದಿಗಾಗಿ 59ಕೋಟಿ ಅನುದಾನ. 65ಹೊಸ ಪ್ರಾಥಮಿಕ ಕೇಂದ್ರಗಳ ಸ್ಥಾಪನೆ,
ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಕಲಬುರಗಿಯಲಲಿ ಐಇಎಫ್ ಕ್ಲಿನಿಕ್ ಸ್ಥಾಪನೆ.
ರಾಜ್ಯದಲ್ಲಿ ಹೊಸದಾಗಿ ಆರು ಇಎಸ್‌ಐ ಆಸ್ಪತ್ರೆಗಳ ನಿರ್ಮಾಣ, ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದರು.