ಕೇರಳಕ್ಕೆ ಮತ್ತಷ್ಟು ಬಿಸಿ ಮಟ್ಟಿಸಿದ ಬಿಸಿಲು: ಪಾಲಕ್ಕಾಡ್, ಕೊಲ್ಲಂ ಸಹಿತ ಐದು ಜಿಲ್ಲೆಗಳಲ್ಲಿ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಸಿಲು ಇನ್ನಷ್ಟು ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇರಳದ ಪಾಲಕ್ಕಾಡ್, ಕೊಲ್ಲಂ, ಪತ್ತನಂತಿಟ್ಟ, ತಿರುವನಂತಪುರಂ ಹಾಗೂ ಆಲಪ್ಪುಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಸಾಗುತ್ತಿದೆ. ಇದು ಭಾನುವಾರದ ವರೆಗೂ ಮುಂದುವರಿಯಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ವಾತಾವರಣದ ಉಷ್ಣತೆ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದೂ ಅದು ಹೇಳಿದೆ.

ಬಿಸಿಲಿನ ಪ್ರಖರತೆಯಿಂದಾಗಿ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಬಹುದು. ನಾಗರಿಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!