ಇನ್ನೂ ಹೆಚ್ಚಲಿದೆ ಮಳೆ: ದೇಶದ ಹಲವು ರಾಜ್ಯಗಳಲ್ಲಿ ರೆಡ್‌ ಅಲರ್ಟ್‌ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಿಂದ ದಕ್ಷಿಣದ ತೆಲಂಗಾಣ ರಾಜ್ಯದವರಗೂ ಮುಂಗಾರು ಮಾರುತಗಳು ಅಬ್ಬರಿಸುತ್ತಿವೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯೊಂದಿಗೆ, ಭಾರತೀಯ ಹವಾಮಾನ ಇಲಾಖೆ (IMD) ಹಲವಾರು ನಗರಗಳಿಗೆ ಮಳೆ ಎಚ್ಚರಿಕೆಯನ್ನು ನೀಡಿದೆ. ತೆಲಂಗಾಣ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಏತನ್ಮಧ್ಯೆ, ಮಳೆಯಿಂದಾಗಿ ಹಲವಾರು ನದಿಗಳು ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿರುವುದರಿಂದ ಗುಜರಾತ್‌ನಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿರುವ ಕಡೆ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಜುಲೈ 11 ರಂದು ತೆಲಂಗಾಣ, ವಿದರ್ಭ ಮತ್ತು ಕರಾವಳಿ ಆಂಧ್ರಪ್ರದೇಶ ಮತ್ತು ದಕ್ಷಿಣ ಛತ್ತೀಸ್‌ಗಢದ ಪಕ್ಕದ ಪ್ರದೇಶಗಳಲ್ಲಿ ತೀವ್ರವಾದ ಆರ್ದ್ರ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!