Monday, August 8, 2022

Latest Posts

ರಾಜ್ಯದಲ್ಲಿ ಹೆಚ್ಚಲಿದೆ ಇನ್ನಷ್ಟು ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ದಿನೇ ದಿನೇ ಬಿಸಿಲ ಒಣಹವೆ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 34 ರಿಂದ 36 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಹೆಚ್ಚುತ್ತಿರುವ ಬಿಸಿಲ ಬೇಗೆಗೆ ಕರಾವಳಿ ಜನತೆ ತತ್ತರಿಸಿದ್ದು , ಪಣಂಬೂರಿನಲ್ಲಿ 35.5, ಕಾರವಾರದಲ್ಲಿ 35.6 ದಾಖಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಉತ್ತರ ಒಳನಾಡಿನಲ್ಲಿಯೂ ಉಷ್ಣಾಂಶ ಏರಿಕೆಯಾಗಿದ್ದು ಕಲಬುರಗಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಪ್ಪಳದಲ್ಲಿ 35.5, ರಾಯಚೂರ್​​ನಲ್ಲಿ 36, ಗದಗದಲ್ಲಿ 35, ಬೆಳಗಾವಿಯಲ್ಲಿ 34.4, ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನು ರಾಜ್ಯದಲ್ಲಿ ಇಂದಿನಿಂದ 8 ರವರೆಗೆ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss