ಬಿಜೆಪಿ ಸಂಪರ್ಕದಲ್ಲಿ 10 ಕ್ಕೂ ಹೆಚ್ಚು ಶಾಸಕರು: ನಳಿನ್ ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೇರೆ ಬೇರೆ ಪಕ್ಷಗಳ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ನಾನು ಮತ್ತು ಮುಖ್ಯಮಂತ್ರಿಗಳು ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಶೀಘ್ರವೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ಕ್ಕೂ ಹೆಚ್ಚು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ.ಬಿಜೆಪಿ ಸೇರ್ಪಡೆಗೆ ಕಾದು ಕುಳಿತಿದ್ದಾರೆ. ಚುನಾವಣೆಗೆ ಮುನ್ನವೇ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಶಾಸಕರು ಬಿಜೆಪಿಗೆ ಸೇರ್ಪಡೆ ಆಗುತ್ತಾರೆ ಎಂದರು.
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಬಿಜೆಪಿಯಲ್ಲಿ ಬಹಳ ಜನ ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ. ಅವರನ್ನು ಸೇರ್ಪಡೆ ಮಾಡುವ ಸಂಬಂಧ ನಾನು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!