ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಐಟಿ ರೇಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಮೇಘನಾ ಫುಡ್ಸ್ ಗ್ರೂಪ್‌ಗೆ ಸಂಬಂಧಿಸಿದ 10 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೇಘನಾ ಫುಡ್ಸ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ನಿರ್ವಹಿಸುತ್ತಿದ್ದು ಕೋರಮಂಗಲ, ಇಂದಿರಾನಗರ ಮತ್ತು ಜಯನಗರದಲ್ಲಿ ಶಾಖೆಗಳನ್ನು ಹೊಂದಿದೆ.

ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಆದಾಯ ತೆರಿಗೆ ಇಲಾಖೆ ಹಾಗೂ ಗೋವಾ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!