ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಭದ್ರಕ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಆಹಾರದಲ್ಲಿ ಹಲ್ಲಿ ಬಿದ್ದ ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಎಖಾ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಊಟ ಮಾಡಿ ವಾಂತಿ ಮಾಡಿಕೊಂಡಿದ್ದು, ಅಸ್ವಸ್ಥಗೊಂಡಿದ್ದಾರೆ. ಅಧಿಕಾರಿಗಳು ಆಹಾರದಲ್ಲಿ ಸತ್ತ ಹಲ್ಲಿಗಳನ್ನು ಪತ್ತೆಹಚ್ಚಿದ್ದು , ತಕ್ಷಣವೇ ಆಹಾರವನ್ನು ನೀಡುವುದನ್ನು ನಿಲ್ಲಿಸಿದ್ದಾರೆ.

ಆದರೆ, ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ತುರ್ತು ವೈದ್ಯಕೀಯ ಸೇವೆ ಒದಗಿಸಲಾಗಿದೆ. ಈ ಘಟನೆಯ ನಂತರ ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು ಶಾಲೆಗೆ ಬಂದು ಸ್ಥಳವನ್ನು ಪರಿಶೀಲಿಸಿದ್ದಾರೆ.

ಇನ್ನು ಈ ಘಟನೆ ಕುರಿತು ಸೋಮವಾರ ವಿಚಾರಣೆ ನಡೆಸಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಚಕ್ರಧರ ಮಲ್ಲಿಕ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!