ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ನೂರಕ್ಕೂ ಹೆಚ್ಚು ಬಸ್‌ಗಳಿಗೆ ಬೆಂಕಿ ಇಡಲಾಗಿದೆ. ದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿದ್ದು, ಢಾಕಾದಲ್ಲಿ ನೂರಕ್ಕೂ ಹೆಚ್ಚು ಬಸ್‌ಗಳಿಗೆ ಬೆಂಕಿ ಇಡಲಾಗಿದೆ.
ಪ್ರಧಾನ ಮಂತ್ರಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಬಸ್‌ಗಳಷ್ಟೇ ಅಲ್ಲದೆ ಆಂಬುಲೆನ್ಸ್‌ಗಳಿಗೂ ಬೆಂಕಿ ಹಚ್ಚಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಪ್ರಯಾಣಿಕರ ಸೋಗಿನಲ್ಲಿ ಬಂದ ಬಿಎನ್‌ಪಿ ಕಾರ್ಯಕರ್ತರು ಬಸ್‌ಗೆ ಬೆಂಕಿ ಹಚ್ಚಿದ್ದಾರೆ.