ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್‌ ಅಭಿಮಾನಿಗಳ ನಡುವೆ ಘರ್ಷಣೆ: 100ಕ್ಕೂ ಹೆಚ್ಚು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗಿನಿಯಾದ 2ನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್ಬಾಲ್ ಪಂದ್ಯವೊಂದರ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ ಉಂಟಾಗಿ ಸುಮಾರು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

2021ರ ದಂಗೆಯ ನಂತರ ಅಧಿಕಾರ ವಹಿಸಿಕೊಂಡು ತನ್ನನ್ನು ತಾನು ಅಧ್ಯಕ್ಷ ಎಂದು ಘೋಷಿಸಿಕೊಂಡ ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥವಾಗಿ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವೇಳೆ ರೆಫ್ರಿ ನೀಡಿದ ವಿವಾದಿತ ತೀರ್ಪು ಅಭಿಮಾನಿಗಳ ಘರ್ಷಣೆಗೆ ಕಾರಣವಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದಾಗಿ ತಿಳಿದುಬಂದಿದೆ.

ಘಟನೆ ನಂತರ ಇಲ್ಲಿನ ಸ್ಥಳೀಯ ಆಸ್ಪತ್ರೆ ಮುಂಭಾಗ ಹೆಣಗಳ ರಾತ್ರಿಯೇ ಇತ್ತು, ಕೆಲವರ ದೇಹಗಳನ್ನ ಆಸ್ಪತ್ರೆಯ ವರಾಂಡದಲ್ಲಿ ಇಡಲಾಗಿತ್ತು. 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ ಎನ್ನಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!