ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತವೆ.
ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಉಂಟಾಗಿವೆ. ಆಟೋ ಟ್ರ್ಯಾಕ್ ಸಿಸ್ಟಂ (AMSಗೆ ಮಾಹಿತಿಯನ್ನು ಒದಗಿಸುವ ಸ್ವಯಂಚಾಲಿತ ಸಂದೇಶ ಸ್ವಿಚಿಂಗ್ ಸಿಸ್ಟಮ್ ನಲ್ಲಿ ಕೆಲವು ಸಮಸ್ಯೆಗಳಿವೆ ಎಂದು ಮೂಲಗಳಲ್ಲಿ ಒಂದು ಪಿಟಿಐಗೆ ತಿಳಿಸಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬ, ಕಾರಣ ಏನು?

