ಹೊಸದಿಗಂತ ವರದಿ, ಮಂಗಳೂರು:
ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪುಂದ ಗ್ರಾ.ಪಂ. ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಸ್ಥಳೀಯ ಓವರ್‌ಹೆಡ್ ಟ್ಯಾಂಕ್‌ನಿಂದ ಪೂರೈಕೆಯಾದ ಕಲುಷಿತ ನೀರು ಕುಡಿದು ನೂರಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ .
ಸ್ಥಳೀಯ ಆರೋಗ್ಯ ಕೇಂದ್ರದಿಂದ ಸೂಕ್ತ ಔಷಧೋಪಚಾರ ಪಡೆದು ಹೆಚ್ಚಿನವರು ಈಗಾಗಲೇ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗ್ರಾಮ ಪಂಚಾಯತ್ ಯಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನಿಂದ ಈ ರೋಗ ಕಾಣಿಸಿಕೊಂಡಿದೆ ಎಂದು ಜನರು ಅನುಮಾನ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ತಹಶೀಲ್ದಾರ ಪ್ರದೀಪ್ ಹಾಗೂ ಆರೋಗ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೀರಿನ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳುಹಿಸಿ, ಅದರ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖಾಧಿಕಾರಿಗಳು ಜನರಿಗೆ ಭರವಸೆ ನೀಡಿದರು.