ಮದುವೆ ಊಟ ಸೇವಿಸಿದವರು ವಾಂತಿ-ಭೇದಿಯಿಂದ ಅಸ್ವಸ್ಥ, ಊರಲ್ಲೇ ಮೊಕ್ಕಾಂ ಹೂಡಿದ ವೈದ್ಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮದುವೆ ಔತಣಕೂಟದಲ್ಲಿ ಪಾಲ್ಗೊಂಡ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.

ಸೋಮವಾರ ಚಿಕ್ಕೋಡಿಯ ಹಿರೇಕೋಡಿ ಹೊರವಲಯದಲ್ಲಿ ಪಟೇಲ್ ಕುಟುಂಬದ ಮದುವೆ ನಡೆದಿತ್ತು. ಈ ಸಮಾರಂಭದಲ್ಲಿ ಸಸ್ಯಾಹಾರ, ಮಾಂಸಹಾರ ಊಟ ಸಿದ್ಧಪಡಿಸಲಾಗಿತ್ತು. ಇದರಲ್ಲಿ ಮಾಂಸಹಾರ ಊಟ ಸೇವಿಸಿದ ನೂರಕ್ಕೂ ಅಧಿಕ ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿರೇಕೋಡಿ ಗ್ರಾಮಕ್ಕೆ ವೈದ್ಯರ ತಂಡ ಭೇಟಿ ಕೊಟ್ಟಿದ್ದು ಗ್ರಾಮಸ್ಥರ ಆರೋಗ್ಯದ ಮೇಲೆ ನಿಗಾ ಇರಿಸಿದೆ. ತೀವ್ರ ಅಸ್ವಸ್ಥಗೊಂಡವರನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!