ಚಾರ್ ಧಾಮ್ ಯಾತ್ರೆಗೆ 12 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿದ್ದಾರೆ: ಸಿಎಂ ಪುಷ್ಕರ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚಾರ್ ಧಾಮ್ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಈ ವರ್ಷದ ಯಾತ್ರೆಗೆ ಇದುವರೆಗೆ 12 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾಹಿತಿ ನೀಡಿದ್ದಾರೆ.

ಯಾತ್ರಾರ್ಥಿಗಳಿಗೆ ಸುಗಮ ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಯಾತ್ರೆಗೆ ಸಂಬಂಧಿಸಿದಂತೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ ಎಂದು ಸಿಎಂ ಧಾಮಿ ತಿಳಿಸಿದ್ದಾರೆ.

ಅದೇ ರೀತಿ ಬದರಿನಾಥ ಯಾತ್ರೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಬದರಿನಾಥ ಧಾಮದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ಹಿಮಾಂಶು ಖುರಾನಾ ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ತಿಳಿಸಿದ್ದಾರೆ.ಏಪ್ರಿಲ್ 20ರೊಳಗೆ ಯಾತ್ರೆಗೂ ಮುನ್ನ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇದಾರನಾಥ ಧಾಮದ ಬಾಗಿಲುಗಳು ಏಪ್ರಿಲ್ 25 ರಂದು ಮತ್ತು ಬದರಿನಾಥ ಧಾಮದ ಬಾಗಿಲುಗಳು ಏಪ್ರಿಲ್ 27 ರಂದು ತೆರೆಯಲ್ಪಡುತ್ತವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!