ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಶ್ರೀರಂಗದೇವರಾಯ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಊಟಕ್ಕೆ ಹೋಗಿದ್ದ ವಿದ್ಯಾರ್ಥಿಗಳಿಗೆ ಅನ್ನ ಸಾಂಬಾರು ಬದಲು ಚಿತ್ರಾನ್ನ ನೀಡಿದ್ದಾರೆ.
ಚಿತ್ರಾನ್ನ ಸೇವಿಸಿದ ಕೆಲವೊತ್ತಿನಲ್ಲೇ ಕೆಲವು ಮಕ್ಕಳಿಗೆ ವಾಂತಿ ಭೇದಿಯಾಗಿದೆ. ತಕ್ಷಣ ಅಸ್ವಸ್ಥ ಮಕ್ಕಳನ್ನು ಸಂಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಮಾಹಿತಿ ತಿಳಿದು ಆಸ್ಪತ್ರೆ ಡಿಎಚ್‌ಓ ಡಾ.ಲಿಂಗರಾಜ್ ಸೇರಿದಂತೆ ಅನೇಕ ಅಧಿಕಾರಿಗಳು ಭೇಟಿ ನೀಡಿದರು.