RAIN EFFECT | ಒಡಿಶಾ, ಪಶ್ಚಿಮ ಬಂಗಾಳ ಕಡೆ ಹೋಗುವ 150ಕ್ಕೂ ಹೆಚ್ಚು ರೈಲುಗಳ ಸೇವೆ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡಾನಾ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 150 ಕ್ಕೂ ಹೆಚ್ಚು ಎಕ್ಸ್‌ಪ್ರೆಸ್  ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ  ರದ್ದುಗೊಳಿಸಿದೆ.

ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್‌ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್‌ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 23 ಮತ್ತು ಅಕ್ಟೋಬರ್ 25 ರ ನಡುವೆ ಸಂಚರಿಸುವ ರೈಲುಗಳನ್ನು ರದ್ದುಗೊಳಿಸುವುದಾಗಿ ಆಗ್ನೇಯ ರೈಲ್ವೆ ವಲಯದ  ಪ್ರಕಟಿಸಿದೆ.

ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋದರೆ ಆಗ್ನೇಯ ರೈಲ್ವೆ ವಲಯದ ಮತ್ತಷ್ಟು ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ಪೂರ್ವ ರೈಲ್ವೆ ಅಕ್ಟೋಬರ್ 24 ರಿಂದ 25 ರವರೆಗೆ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!