ಹೊಸದಿಗಂತ ಡಿಜಿಟಲ್ ಡೆಸ್ಕ್:
ಥಾಯ್ಲೆಂಡ್‌ನಲ್ಲಿ ವಾರಕ್ಕೆ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದು ಯಾವುದೇ ಸಾಂಕ್ರಾಮಿಕ ರೋಗದಿಂದಲ್ಲ, ವಿಪರೀತ ವಾಯುಮಾಲಿನ್ಯದಿಂದ! ಹೌದು, ಬ್ಯಾಂಕಾಕ್‌ನಲ್ಲಿ ವಿಪರೀತ ವಾಯುಮಾಲಿನ್ಯದಿಂದಾಗಿ ಒಂದೇ ವಾರದಲ್ಲಿ ಎರಡು ಲಕ್ಷ ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜೀವಭಯದಿಂದ ಜನ ಜೀವನನಡೆಸುತ್ತಿದ್ದು, ಜೀಚಹಾನಿಕಾರಕ ಹೊಗೆಯ ಜತೆ ಬದುಕು ಸಾಗಿಸುತ್ತಿದ್ದಾರೆ. ಬ್ಯಾಂಕಾಕ್‌ನಲ್ಲಿ ಕೈಗಾರಿಕಾ ಹೊರಸೂಸುವಿಕೆ, ವಾಹನಗಳ ಹೊಗೆ ಹಾಗೂ ಕೃಷಿ ಕ್ಷೇತ್ರಗಳಲ್ಲಿನ ಬೆಳೆ ಸುಡುವಿಕೆಯಿಂದಾಗಿ ಹೊಗೆ ಹೆಚ್ಚಾಗಿದೆ.
ಒಟ್ಟಾರೆ ಮೂರು ತಿಂಗಳಲ್ಲಿ ಮಾಲೀನ್ಯದ ಕಾರಣದಿಂದಾಗಿ 1.3 ದಶಲಕ್ಷಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಮಕ್ಕಳು ಮತ್ತು ಗರ್ಭಿಣಿಯರು ಮನೆಯಿಂದ ಹೊರಬಾರದಂತೆ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.