ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳ ಜಿಲ್ಲೆಯ ಅಳವಂಡಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ.
ಹಾಸ್ಟೆಲ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ ವಿದ್ಯಾರ್ಥಿನಿಯರಿಗೆ ವಾಂತಿಯಾಗಿದೆ. 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನದ ಊಟದಿಂದ ಕೆಲವರು ಅಸ್ವಸ್ಥರಾದರೆ, ಬೆಳಗ್ಗೆ ತಿಂಡಿ ತಿಂದ ಕೆಲವರಿಗೂ ವಾಂತಿಯಾಗಿದೆ. ಶುಚಿಯಾದ ಆಹಾರ, ಶುಚಿಯಾದ ಆಹಾರ ಕ್ರಮ ಯಾವುದೂ ಇಲ್ಲ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.