ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ- ನಗರಕೆರೆಯಲ್ಲಿ ಕಟ್ಟೆಚ್ಚರ

ಹೊಸದಿಗಂತ ವರದಿ, ಮಂಡ್ಯ:
ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮಕ್ಕೆ ಸರಬರಾಜು ಮಾಡಿದ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ಅದಕ್ಕೆ ಕಲುಷಿತ ನೀರು ಸೇರ್ಪಯಾಗಿದ್ದು, ಈ ನೀರನ್ನು ಸೇವಿಸಿದ ಗ್ರಾಮಸ್ಥರಿಗೆ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗ್ರಾಮದ ಸುಮಾರು 26 ಮಂದಿಗೆ ವಾಂತಿ, ಬೇದಿ ಕಾಣಿಸಿಕೊಂಡಿದ್ದುಘಿ, ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ.ಎನ್. ಧನಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ಸುಮಾರು 1800 ಜನರಿಗೂ ಆರೋಗ್ಯ ತಪಾಸಣೆಗೊಳಪಡಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯಾಧಿಕಾರಿಗಳು ಗ್ರಾಮದಲ್ಲೇ ವಾಸ್ತವ್ಯ ಹೂಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾಲಯವನ್ನು ತೆರೆಯಲಾಗಿದೆ.
ಕಲುಷಿತಗೊಂಡಿದ್ದ ನೀರು ಟ್ಯಾಂಕ್ ಸರಬರಾಜಾಗಿದ್ದುಘಿ, ತಕ್ಷಣ ಟ್ಯಾಂಕನ್ನು ಸ್ವಚ್ಚಗೊಳಿಸುವಂತೆ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಹ ಸ್ಥಳಕ್ಕೆ ತೆರಳಿ ಗ್ರಾಮದಲ್ಲಿ ಸ್ವಚ್ಚತಾ ಕಾರ‌್ಯ ಕೈಗೊಂಡಿದ್ದಾರೆ. ಸಧ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದುಘಿ, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಧನಂಜಯ್ ತಿಳಿಸಿದ್ದಾರೆ.
ಈಗಾಗಲೇ ಗ್ರಾಮದ ಎಲ್ಲರಿಗೂ ತಪಾಸಣೆ ಮಾಡಲಾಗಿದೆ. ಎಲ್ಲರೂ ಕಡ್ಡಾಯವಾಗಿ ಬಿಸಿ ನೀರು ಸೇವಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲೆ ಸಿಬ್ಬಂದಿಗಳು ಸಂಪೂರ್ಣ ನಿಗಾ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!