ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಬಸ್ ಪಲ್ಟಿಯಾಗಿ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಕಣಿಮಂಗಲಂ ಬಳಿ ಶುಕ್ರವಾರ ನಡೆದಿದೆ.
ತ್ರಿಶೂರ್ನಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಎರಡು ಖಾಸಗಿ ಆಸ್ಪತ್ರೆಗಳಿಗೆ ಮತ್ತು ತ್ರಿಶೂರ್ ತಾಲೂಕು ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ ರಾಜನ್ ತಿಳಿಸಿದ್ದಾರೆ.
ಸಚಿವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳನ್ನು ಪರಿಶೀಲಿಸಿದ್ದಾರೆ. ಈ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.