ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸಿಗಂದೂರಿಗೆ ತರೆಳುತ್ತಿದ್ದ ಪ್ರವಾಸಿಗರಿದ್ದ ಖಾಸಗಿ ಬಸ್ಸೊಂದು ಶಿವಮೊಗ್ಗದ ನಿದಿಗೆ ಬಳಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರದಂದು ಬೆಳಗಿನ ಜಾವ ನಡೆದಿದೆ.

ವೇಗವಾಗಿ ಬಂದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಕೂಡಲೆ ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಿನ ಪ್ರವಾಸಿಗರು ಎರಡು ಬಸ್ಸುಗಳಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಪಲ್ಟಿಯಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!