ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ನಡೆದಿದೆ. 20 ಹೆಚ್ಚು ಜನರನ್ನು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ವಿಜಯಪುರ ಹಾಗೂ ಬಾಗಲಕೋಟೆಯ ಖಾಸಗಿ ಮತ್ತು ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಶನಿವಾರ (ಜು.26) ರಾತ್ರಿ ಗ್ರಾಮದ ಕೆಲವರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರವಿವಾರ ಹಾಗೂ ಸೋಮವಾರ 25 ಕ್ಕೂ ಅಧಿಕ ಜನರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ.
ಕುಡಿಯುವ ನೀರು ಸಬರಾಜು ಮಾಡುವ ಪೈಪ್ಗಳು ಅಲ್ಲಲ್ಲಿ ಹೊಡೆದು ಹೋಗಿದ್ದು, ಅದಕ್ಕೆ ಚರಂಡಿ ನೀರು ಸೇರಿಕೊಂಡಿದೆ. ಕಲುಷಿತಗೊಂಡ ನೀರನ್ನು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ.