Saturday, December 9, 2023

Latest Posts

ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ವಿದ್ಯಾರ್ಥಿಗಳು ಚಿಕನ್ ಊಟವನ್ನು ಮಾಡಿದ್ದರು. ಅದನ್ನು ತಿಂದ ಬಳಿಕ ವಾಂತಿ-ಬೇಧಿ ಶುರುವಾಗಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಒಟ್ಟು

30 ವಿದ್ಯಾರ್ಥಿಗಳಿಗೆ ವಾಂತಿ-ಬೇಧಿಯಾಗಿದ್ದು, ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ 15 ಮಕ್ಕಳಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ವಿಷಯ ತಿಳಿದ ಕೂಡಲೇ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!