Monday, August 15, 2022

Latest Posts

30 ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆ ಭರ್ತಿ: ಗೃಹ ಸಚಿವ ಅರಗ ಜ್ಞಾನೇಂದ್ರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಬೆಳಗಾವಿ :

ಕಳೆದ 5 ವರ್ಷದ ಹಿಂದೆ ಸುಮಾರು 30 ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳು ಖಾಲಿ ಇದ್ದವು. ಅವುಗಳನ್ನು ಭರ್ತಿ ಮಾಡುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಬುಧವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ಸಾಕಷ್ಟು ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಸದ್ಯ 16 ಸಾವಿರ ಹುದ್ದೆ ಖಾಲಿ ಇದ್ದು, ಈ ಪೈಕಿ ನಾಲ್ಕು ಸಾವಿರ ಹುದ್ದೆಯನ್ನು ಭರ್ತಿ ಮಾಡಲಾಗುತಿದೆ. ವರ್ಷದ ಕೊನೆಯಲ್ಲಿ ಎಸ್ ಐ ಹುದ್ದೆಯನ್ನು ಭರ್ತಿ ಮಾಡಲಾಗುವುದು ಎಂದರು.
ಪೊಲೀಸ್ ಸಿಬ್ಬಂದಿಗಳಿಗೆ ಹಳೆಯ ವಾಹನಗಳನ್ನು ಬದಲಾವಣೆ ಮಾಡಲಾಗುವುದು. ಅಲ್ಲದೆ ವಾಕಿಟಾಕಿಯನ್ನು ಸಹ ಆಧುನಿಕ ತಂತ್ರಜ್ಞಾನದಂತೆ ಬದಲಾವಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಅಲ್ಲದೆ, 112 ನಿಂದ ಬಹಳ ದೊಡ್ಡ ಆವಿಷ್ಕಾರ. 15 ನಿಮಿಷಗಳಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತಿದೆ.112ಗೆ ಕರೆ ಮಾಡಿದರೆ ಪ್ರಕರಣ ನೀಡುವ ಅವಶ್ಯಕತೆ ಬರುವುದಿಲ್ಲ. ಆರೋಪಿಗಳನ್ನು ತತ್ವರಿತವಾಗಿ ಹಿಡಿಯಲು ಅನಕೂಲವಾಗುತ್ತದೆ ಎಂದರು.
ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ತನಿಖೆಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರಲ್ಲಿ ಎಷ್ಟೇ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳಿದ್ದರೂ ಕ್ರಮ ಜರುಗಿಸಲಾಗುವುದು. ಸದ್ಯ ಪ್ರಕರಣ ತನಿಖಾ‌ ಹಂತದಲ್ಲಿದ್ದು ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss