ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂದ್ರ ಮಾಜಿ ಸಿಎಂ ವೈ.ಎಸ್ ಜಗನ್ಮೋಹನ್ ರೆಡ್ಡಿ ಅಧಿಕಾರಾವಧಿಯಲ್ಲಿ 30 ಸಾವಿರಕ್ಕೂ ಅಧಿಕ ಬಾಲಕಿಯರು, ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಆಂಧ್ರಪ್ರದೇಶದ ಡಿಸಿಎಎಂ ಪವನ್ ಕಲ್ಯಾಣ್ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಎನ್ಟಿಆರ್ ಜಿಲ್ಲೆಯಲ್ಲಿ ಕಾಣೆಯಾಗಿದ್ದ ಬಾಲಕಿ, ಮಹಿಳೆಯರ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಕೇಸ್ಗಳನ್ನು ಪರಿಹರಿಸಿದ್ದಕ್ಕಾಗಿ ವಿಜವಾಡದ ಸ್ಪೆಷಲ್ ಟಾಸ್ಕ್ ಫೋರ್ಸ್ ಹಾಗೂ ಗೃಹಸಚಿವೆ ವಂಗಲಪುಡಿ ಅನಿತಾ ಅವರಿಗೆ ಪವನ್ ಕಲ್ಯಾಣ್ ಅವರು ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಎಕ್ಸ್ ಅಕೌಂಟ್ನಲ್ಲಿ ಈ ಹಿಂದಿನ ವೈ.ಎಸ್ ಜಗನ್ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ನಾಪತ್ತೆ ಪ್ರಕರಣಗಳ ಬಗ್ಗೆ ಪವನ್ ಕಲ್ಯಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಅಕೌಂಟ್ನಲ್ಲಿ ಪೋಸ್ಟ್ ಮಾಡಿರುವ ಪವನ್ ಕಲ್ಯಾಣ್, ಈ ಹಿಂದಿನ ವೈಸಿಪಿ ಸರ್ಕಾರದಲ್ಲಿ 30 ಸಾವಿರಕ್ಕೂ ಅಧಿಕ ಬಾಲಕಿಯರು, ಮಹಿಳೆಯರು ಕಾಣೆಯಾಗಿದ್ದರು. ಆದರೆ ಈ ಬಗ್ಗೆ ಒಂದೂ ಸ್ಟೇಟ್ಮೆಂಟ್ ಕೂಡ ಜಗನ್ಮೋಹನ್ ರೆಡ್ಡಿ ಸರ್ಕಾರ ನೀಡಿರಲಿಲ್ಲ. ಈಗ ಎಲ್ಲವೂ ಬದಲಾಗಿದ್ದು ಆಂಧ್ರದಲ್ಲಿ ಎನ್ಡಿಎ ನೇತೃತ್ವದ ಸರ್ಕಾರ ಹೊಸ ಕಾನೂನು ಜಾರಿ ಮಾಡಿದೆ. ಹೀಗಾಗಿಯೇ 18 ಪ್ರಕರಣಗಳನ್ನು ಪರಿಹರಿಸಿದ್ದಕ್ಕೆ ಹೆಮ್ಮೆ ಆಗುತ್ತಿದೆ. ರಾಜ್ಯದಲ್ಲಿ ಬಾಲಕಿಯರಿಗೆ, ಮಹಿಳೆಯರಿಗೆ ಸೇರಿದಂತೆ ಎಲ್ಲರಿಗೂ ಸುರಕ್ಷತೆ, ರಕ್ಷಣೆ ಇದೆ ಎಂದು ಹೇಳಿದ್ದಾರೆ.