ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧುಗಿರಿ ತಾಲೂಕಿನ ಮಿಡಿಗೇಶಿ – ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಭಾಗಿಯಾಗಿದ್ದ ಜನರಲ್ಲಿ 35 ಜನ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದಾರೆ.
ಎಂಟು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಮಾಡಲಾಗಿದೆ. 300 ಮನೆಗಳಿರುವ ಗ್ರಾಮದಲ್ಲಿ 29 ವರ್ಷದ ಬಳಿಕ ಲಕ್ಕಮ್ಮ-ಕೆಂಪಮ್ಮ ಜಾತ್ರೆ ನಡೆಯುತ್ತಿದೆ.
ಕುಡಿಯುವ ನೀರಿನಿಂದಾಗಿ ವಾಂತಿ-ಬೇಧಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.