ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕು ನಿಯಂತ್ರಿಸಲು ದೇಶದ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 38.86 ಕೋಟಿ ಡೋಸ್ ನ ಕೊರೋನಾ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈವರೆಗೂ ಒಟ್ಟು 1,54,20,956 ಡೋಸ್ ಲಸಿಕೆಗಳು ಲಭ್ಯವಿದ್ದು, 37,31,88,834 ಡೋಸ್ ಲಸಿಕೆ ಬಳಕೆಯಾಗಿದೆ. ಮುಂದಿನ ದಿನಗಳಲ್ಲಿ 63,84,230 ಡೋಸ್ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಭಾರತದಲ್ಲಿ ಜನವರಿ 16ರಿಂದ ಪ್ರಾರಂಭವಾದ ಲಸಿಕಾ ಅಭಿಯಾನದಲ್ಲಿ ಸ್ವದೇಶಿ ನಿರ್ಮಿತ ಕೋವೀಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ಬಳಕೆಗೆ ಬಂದಿತ್ತು.
ದೇಶಾದ್ಯಂತ ಒಟ್ಟು 37,73,52,501 ಮಂದಿ ಕೊರೋನಾ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.