ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿಯ ವೈಕುಂಠ ದ್ವಾರದ ದರ್ಶನದ ಟೋಕನ್ ಪಡೆಯುವ ವೇಳೆ ಕಾಲ್ತುಳಿತ ಸಂಭವಿಸಿ 6 ಭಕ್ತರು ಕೊನೆಯುಸಿರುಳೆದಿದ್ದಾರೆ. ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕವಿದ್ದಲ್ಲಿ ಏರ್ಲಿಫ್ಟ್ ಮಾಡುವಂತೆ ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಬುದ್ಧೇಟಿ ನಾಯುಡುಬಾಬು (51), ವಿಶಾಖಪಟ್ಟಣಂನ ರಜನಿ (47), ಲಾವಣ್ಯ (40), ಶಾಂತಿ (34), ಕರ್ನಾಟಕದ ಬಳ್ಳಾರಿಗೆ ಸೇರಿದ ನಿರ್ಮಲ (50) ಹಾಗೂ ಓರ್ವ ಪುರುಷರೊಬ್ಬರು ಕಾಲ್ತುಳಿದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನುಳಿದತೆ 40ಕ್ಕೂ ಹೆಚ್ಚು ಜನರು ಇದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಭಕ್ತರು ಪ್ರಾಣ ಕೊಳೆದುಕೊಂಡಿದ್ದು ಹಲವಾರು ಭಕ್ತರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಘಟನೆ ನಡೆದ ಕೌಂಟರ್ನಲ್ಲಿ ಟೋಕನ್ ಕೊಡುವುದನ್ನು ನಿಲ್ಲಿಸಲಾಗಿದೆ. ಆದರೆ ಉಳಿದ ಕೌಂಟರ್ಗಳಲ್ಲಿ ಇಂದು ಬೆಳಗ್ಗೆಯಿಂದ ಟೋಕನ್ ವಿತರಣೆ ಮಾಡಲಾಗುತ್ತಿದೆ. ವೈಕುಂಠ ಏಕಾದಶಿಗೆ ಟಿಕೆಟ್ಗಳನ್ನು ಭಕ್ತರಿಗೆ ನೀಡಲಾಗುತ್ತಿದೆ.
ಇನ್ನು ರುಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರವವರ ಪೈಕಿ ನಾಲ್ವರು ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದರೇ ಅವರನ್ನು ಏರ್ಲಿಫ್ಟ್ ಮೂಲಕ ಹೈದರಾಬಾದ್ನ ಆಸ್ಪತ್ರೆಗೆ ಸ್ಥಳಾಂತರ ಮಾಡುವಂತೆ ಸಿಎಂ ಚಂದ್ರಬಾಬು ನಾಯ್ಡು ಸೂಚನೆ ಕೊಟ್ಟಿದ್ದಾರೆ.