ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಂಡವಪುರ ತಾಲೂಕಿನ ನರಹಳ್ಳಿಯಲ್ಲಿ ಪ್ರಸಾದ ಸೇವಿಸಿ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿಯಿಂದ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಚನ್ನಬೀರೇಶ್ವರ ಹಬ್ಬ ಹಿನ್ನೆಲೆ ಪ್ರಸಾದ ವಿತರಿಸಲಾಗಿತ್ತು. ಇಂದು ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಉಂಟಾಗಿದ್ದು, ಅಸ್ವಸ್ಥಗೊಂಡವರನ್ನು ಪಾಂಡವಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ, ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.