ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರ ಜಮೀನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿರುವುದು ಹೆಚ್ಚಾಗುತ್ತಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಕರ್ನಾಟಕದಲ್ಲಿ ವಕ್ಫ್ 50,000 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಸಿಎಂ ಕೇವಲ ಅಧಿಸೂಚನೆ ಹಿಂಪಡೆದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದರು.
ರೈತರ ಜಮೀನು ಯಾವಾಗ ವಕ್ಫ್‌ಗೆ ಹಸ್ತಾಂತರವಾಗುತ್ತದೋ ಗೊತ್ತಿಲ್ಲ. ಈ ವಿಷಯವನ್ನು ಸಂಸತ್ತಿನ ಜಂಟಿ ಸ್ಪೀಕರ್ ಅವರ ಗಮನಕ್ಕೆ ತಂದಿದ್ದೇನೆ. ಹುಬ್ಬಳ್ಳಿ, ಬೆಂಗಳೂರಿಗೆ ಆಗಮಿಸಿ ರೈತರ ಮನವಿ ಸ್ವೀಕರಿಸುವಂತೆ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಗೆ ಮನವಿ ಮಾಡಿದ್ದೇನೆ. ನ.6 ಮತ್ತು 7ರಂದು ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದರು.