ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಕ್ಕಾದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಸಿಲು ತಾಳಲಾರದೆ 550ಕ್ಕೂ ಹೆಚ್ಚು ಯಾತ್ರಿಕರು ಮೃತಪಟ್ಟಿದ್ದಾರೆ.
ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರುಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ ತೆರಳಿದ್ದರು. ಅಲ್ಲಿನ ತಾಪಮಾನಕ್ಕೆ ತತ್ತರಿಸಿದ 550ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು , ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ (Mecca) ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ.