ಮೆಕ್ಕಾದಲ್ಲಿ ತಾಪಮಾನ ಏರಿಕೆ, ಬಿಸಿಲು ತಾಳಲಾರದೆ 550ಕ್ಕೂ ಹೆಚ್ಚು ಯಾತ್ರಿಕರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೆಕ್ಕಾದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಸಿಲು ತಾಳಲಾರದೆ 550ಕ್ಕೂ ಹೆಚ್ಚು ಯಾತ್ರಿಕರು ಮೃತಪಟ್ಟಿದ್ದಾರೆ.

The Hajj Stampede: Why Do Crowds Run? - The Atlanticಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರುಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು. ಅಲ್ಲಿನ ತಾಪಮಾನಕ್ಕೆ ತತ್ತರಿಸಿದ 550ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

The 10-Minute Mecca Stampede That Made History | Vanity Fair

ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು , ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ (Mecca) ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್‌ ರಾಜತಾಂತ್ರಿಕರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!