ಹುಚ್ಚೆದ್ದ ಮಧುವಾಹಿನಿ, ತೇಜಸ್ವಿನಿ: ಅಪಾಯದಲ್ಲಿದ್ದ 60ಕ್ಕೂ ಅಧಿಕ ಮಂದಿಯ ರಕ್ಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಡಿಮಳೆಗೆ ಪ್ರವಾಹಕ್ಕೆ ಒಳಗಾಗಿ ಸಂಕಷ್ಟದಲ್ಲಿದ್ದ ಕಾಸರಗೋಡು ಜಿಲ್ಲೆಯ ಮಧೂರಿನ ಮಧೂರಿನ 60 ಕ್ಕೂ ಅನೇಕ ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಧುವಾಹಿನಿ ಹೊಳೆ ಉಕ್ಕಿ ಹರಿಯುತ್ತಿದ್ದು, ಇದರ ಪರಿಣಾಮವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ನೆರೆ ಹಾವಳಿ ಉಂಟಾಗಿದೆ. ಇನ್ನು ಈ ಭಾಗದಲ್ಲಿ ತೇಜಸ್ವಿನಿ ನದಿ ಕೂಡಾ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಹಲವು ಮನೆಗಳು ಅಪಾಯದ ಸ್ಥಿತಿ ಎದುರಿಸುತ್ತಿವೆ.

ವಿಕೋಪಗಳನ್ನು ಎದುರಿಸಲು ಜಿಲ್ಲಾಡಳಿತ ಸರ್ವ ಸಜ್ಜಾಗಿದ್ದು, ನೆರೆ ಸಂತ್ರಸ್ತರಿಗಾಗಿ ಸೈಂಟ್ ಮೇರಿಸ್ ಎಲ್‌ಪಿ ಶಾಲೆಯಲ್ಲಿ ವಿಶೇಷ ಕೇಂದ್ರವನ್ನು ತೆರೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!