ಭಾರತದಲ್ಲಿ 74 ಲಕ್ಷಕ್ಕೂ ಹೆಚ್ಚು WhatsApp ಖಾತೆ ನಿಷೇಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಾಟ್ಸಪ್ (WhatsApp) ಆಗಸ್ಟ್‌ನಲ್ಲಿ ಭಾರತದ (India) 74.2 ಲಕ್ಷ ಖಾತೆಗಳನ್ನು ನಿಷೇಧಿಸಿದೆ.

2021 ರ ಹೊಸ IT ನಿಯಮಗಳಿಗೆ ಅನುಸಾರವಾಗಿ ಭಾರತದಲ್ಲಿ 7.4 ಮಿಲಿಯನ್‌ಗಿಂತಲೂ ಹೆಚ್ಚು, ಅಂದರೆ, 74 ಲಕ್ಷಕ್ಕೂ ಹೆಚ್ಚು ‘ಕೆಟ್ಟ’ ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದೆ.

ಆಗಸ್ಟ್ 1 – 31 ರ ನಡುವೆ ದೇಶದಲ್ಲಿ ಕನಿಷ್ಠ 74,20,748 ಖಾತೆಗಳನ್ನು ನಿಷೇಧಿಸಿದೆ ಎಂದು ವರದಿಯಾಗಿದೆ. ಈ ಪೈಕಿ ಬಳಕೆದಾರರಿಂದ ಯಾವುದೇ ವರದಿಗಳು ಬರುವ ಮೊದಲೇ ಸುಮಾರು 35, 06,905 ಖಾತೆಗಳನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದೂ ತಿಳಿದುಬಂದಿದೆ.

ಅಹಿತಕರ ಸಂದೇಶ ತಡೆಗಟ್ಟುವಲ್ಲಿ ಮತ್ತು ಎದುರಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಸುರಕ್ಷತಾ ವೈಶಿಷ್ಟ್ಯತೆಗಳು ಮತ್ತು ನಿಯಂತ್ರಣಗಳ ಜೊತೆಗೆ ಈ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡಲು ಇಂಜಿನಿಯರ್‌ಗಳು, ಡೇಟಾ ವಿಜ್ಞಾನಿಗಳು, ವಿಶ್ಲೇಷಕರು, ಸಂಶೋಧಕರು ಮತ್ತು ಕಾನೂನು ತಜ್ಞರನ್ನು ನೆಮಿಸಿಕೊಳ್ಳುವುದಾಗಿ ವಾಟ್ಸಪ್ ತಿಳಿಸಿದೆ.

ಮಾಸಿಕ ಅನುಸರಣೆ ವರದಿಯಲ್ಲಿ, ಭಾರತದಲ್ಲಿ ಆಗಸ್ಟ್‌ನಲ್ಲಿ ದಾಖಲೆಯ 14,767 ದೂರು ವರದಿಗಳನ್ನು ಸ್ವೀಕರಿಸಿದೆ ಮತ್ತು 71 ಖಾತೆಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿದುಬಂದಿದೆ.

ಈ ಬಳಕೆದಾರ-ಸುರಕ್ಷತಾ ವರದಿಯು ಸ್ವೀಕರಿಸಿದ ಬಳಕೆದಾರರ ದೂರುಗಳ ವಿವರಗಳನ್ನು ಮತ್ತು ವಾಟ್ಸಾಪ್‌ ತೆಗೆದುಕೊಂಡ ಅನುಗುಣವಾದ ಕ್ರಮಗಳನ್ನು ಒಳಗೊಂಡಿದೆ. ಜೊತೆಗೆ ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿನ ದುರ್ಬಳಕೆಯನ್ನು ಎದುರಿಸಲು ವಾಟ್ಸಾಪ್‌ನ ಸ್ವಂತ ತಡೆಗಟ್ಟುವ ಕ್ರಮಗಳನ್ನು ಒಳಗೊಂಡಿದೆ ಎಂದು ಕಂಪನಿ ತಿಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!