ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 90 ಲಕ್ಷಕ್ಕೂ ಅಧಿಕ ಲಸಿಕೆಗಳು ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ದೇಶದಲ್ಲಿ ಈವರೆಗೆ ಅನುಪಯುಕ್ತ ಸೇರಿದಂತೆ 16,44,77,100 ಡೋಸ್ ಗಳನ್ನು ಬಳಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈವರೆಗೆ 17.35 ಕೋಟಿ (17,35,07,770) ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಇನ್ನೂ 10 ಲಕ್ಷ ಡೋಸ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ದೆಹಲಿ ಸೇರಿದಂತೆ ಹತ್ತು ರಾಜ್ಯಗಳು ಒಂದು ದಿನದಲ್ಲಿ ವರದಿಯಾದ ಹೊಸ ಕೋವಿಡ್ -19 ಪ್ರಕರಣಗಳಲ್ಲಿ ಶೇಕಡಾ 71.81 ರಷ್ಟು ಹೊಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.