ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರನಟ ದರ್ಶನ್‌ಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗುವ ಲಕ್ಷಣ ಗೋಚರಿಸಿದ್ದು, ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬರೋಬ್ಬರಿ 1300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಇಂದು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.
ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ಅವರು ನ್ಯಾಯಾಲಯಕ್ಕೆ ಆಗಮಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಮೂಲಗಳ ಮಾಹಿತಿ ಪ್ರಕಾರ ಈ ಚಾರ್ಜ್ ಶೀಟ್‌ನಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಕೆಲ ಸಾಕ್ಷ್ಯಗಳ ಹೇಳಿಕೆಗಳು, ಪುನೀತ್ ಮೊಬೈಲ್‌ನಿಂದ ರಿಟ್ರೀವ್ ಮಾಡಲಾದ ಎಂಟು ಪೋಟೋಗಳು ಸೇರಿದಂತೆ ಮಹತ್ವದ ದಾಖಲೆ ಸೇರಿಕೆಯಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ