ಮಾಜಿ ಸಚಿವ ರೇವಣ್ಣಗೆ ಮತ್ತಷ್ಟು ಸಂಕಷ್ಟ: ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಬಳಿಕ ಸಂತ್ರಸ್ತೆ ನಾಪತ್ತೆಯಾಗಿದ್ದಾಳೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿ ಇದೀಗ ಭವಾನಿ ರೇವಣ್ಣ ಅವರ ಸಂಬಂಧಿಯೊಬ್ಬರನ್ನು ಅಧಿಕಾರಿಗಳು ಬಂಧಿಸಿದ್ದು, ಈ ಮೂಲಕ ಈ ಪ್ರಕರಣದಲ್ಲಿ ಮೊದಲನೇ ಬಂಧನವಾಗಿದೆ.

ಮಹಿಳೆಯ ನಾಪತ್ತೆಗೆ ಸಂಬಂಧಿಸಿ ಆಕೆಯ ಪುತ್ರ ಶುಕ್ರವಾರ ಕೆಆರ್ ನಗರ ಠಾಣೆಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹೆಚ್.ಡಿ. ರೇವಣ್ಣ ವಿರುದ್ಧ ಸೆಕ್ಷನ್ 364/ಎ 365 ಹಾಗೂ 34 ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ರೇವಣ್ಣ ಎ1 ಆರೋಪಿಯಾಗಿದ್ದು, ಸತೀಶ್ ಬಾಬು ಎಂಬವರು ಎ೨ ಆರೋಪಿಯನ್ನಾಗಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!