ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ನ ಮುಂಜಾನೆ -ಸಂಜೆಯ ವಾಕಿಂಗ್: ಅರುಣ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಫ್ಲಾಪ್ ಶೋ ಆಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೊ ಯಾತ್ರೆ ರಾಹುಲ್ ಗಾಂಧಿ ನಡೆಸುತ್ತಿರುವ ಮುಂಜಾನೆ ಮತ್ತು ಸಂಜೆಯ ವಾಕಿಂಗ್ ಆಗಿದೆ ಎಂದರು.
ಪರಸ್ಪರ ದೂರವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಒಂದುಗೂಡಿಸುವ ಯಾತ್ರೆ ಇದಾಗಿದೆ. ಅವರಿಬ್ಬರನ್ನು ಒಂದುಗೂಡಿಸುವಲ್ಲಿ ರಾಹುಲ್ ಗಾಂಧಿ ಸುಸ್ತು ಹೊಡೆದಿದ್ದಾರೆ. ಸ್ವತಃ ಕಾಂಗ್ರೆಸ್ ಪಕ್ಷದವರಿಗೂ ಈ ಯಾತ್ರೆ ಬೇಡವಾಗಿದೆ ಎಂದು ಅರುಣ್ ಸಿಂಗ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!