ಮಾಸ್ಕೋ ಶಾಪಿಂಗ್ ಸೆಂಟರ್‌ನಲ್ಲಿ ಅಗ್ನಿ ಅವಘಡ: ಬಾನೆತ್ತರ ದಟ್ಟ ಹೊಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾದ ಮಾಸ್ಕೋ ಶಾಪಿಂಗ್ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಏಳು ಸಾವಿರ ಚದರ ಮೀಟರ್ ವ್ಯಾಪ್ತಿಯಲ್ಲಿ ಬೆಂಕಿ ಹರಡಿದೆ.
ಬೆಂಕಿ ನಂದಿಸಲು ಅಗ್ನಿ ಶಾಮಕ ದಳದವರು ಹರಸಾಹ ಪಡುತ್ತಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಜಾರಿಯಲ್ಲಿದೆ.

ಉತ್ತರ ಉಪನಗರ ಖಿಮ್ಕಿಯಲ್ಲಿನ ಮೆಗಾ ಖಿಮ್ಕಿ ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿದೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರಬಹುದು ಎಂದು ಊಹಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!