Tuesday, July 5, 2022

Latest Posts

ಇಂದಿನಿಂದ ಸಂಸತ್ ಅಧಿವೇಶನ ಪ್ರಾರಂಭ: ಚರ್ಚೆ ನಡೆಸಲು ಪ್ರತಿಪಕ್ಷಗಳು ಸಜ್ಜು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂದಿನಿಂದ 19 ದಿನಗಳ ಕಾಲ ಈ ಮುಂಗಾರು ಸಂಸತ್ ಅಧಿವೇಶನ ಜರುಗಲಿದ್ದು, ಅಧಿವೇಶನದಲ್ಲಿ ದೇಶದ ಆರ್ಥಿಕತೆ, ಇಂಧನ ದರ ಏರಿಕೆ ಸೇರಿದಂತೆ ಅನೇಕ ವಿಷಯಗಳ ಚರ್ಚೆ ನಡೆಸುವ ಸಾಧ್ಯತೆ ಇದೆ.
ಇಂದು ಅಧಿವೇಶನದ ಮೊದಲ ದಿನವಾಗಿದ್ದು, ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸದಸ್ಯರು ಹಾಗೂ ಉಪಚುನಾವಣೆಗಳಲ್ಲಿ ವಿಜಯ ಸಾಧಿಸಿ ಲೋಕಸಭೆ- ರಾಜ್ಯಸಭೆ ಪ್ರವೇಶಿಸಿದ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಧಿವೇಶನದಲ್ಲಿ 29 ಹೊಸ ಮಸೂದೆಗಳನ್ನು ಮಂಡಿಸಿ ಅನುಮೋಧನೆ ಪಡೆಯಲು ಸರ್ಕಾರ ಸಜ್ಜಾಗಿದೆ.
ದೇಶದಲ್ಲಿ ಹೆಚ್ಚಳವಾಗುತ್ತಿರುವ ಇಂಧನ ದರ, ಕೋವಿಡ್ ನಿಯಂತ್ರಣ, ನೂತನ ಕೃಷಿ ಕಾಯ್ದೆ ಸೇರಿದಂತೆ ಮಹತ್ವದ ವಿಚಾರಗಳ ಕುರಿತು ವಿಪಕ್ಷಗಳು ಸಜ್ಜಾಗಿದೆ.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಅನೇಕ ಆರೋಗ್ಯಕರ ಹಾಗೂ ಫಲಪ್ರದವಾಗಿರುವ ವಿಚಾರಗಳನ್ನು ಚರ್ಚಿಸಲು ಸಿದ್ಧರಾಗಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss