ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಂಎಲ್‌ಸಿ ಚುನಾವಣೆ ಮತ್ತು ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಮತ ಎಣಿಕೆಯ ಕಾರಣದಿಂದಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ಮದ್ಯ ಮಾರಾಟ ಇರುವುದಿಲ್ಲ.
ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.
ತೆರಿಗೆ ಕಟ್ಟುವುದರಲ್ಲಿ ನಾವು ದೊಡ್ಡ ಪಾಲನ್ನು ಹೊಂದಿದ್ದು, ಪದೇ ಪದೆ ಇಂತಹ ಪರಿಸ್ಥಿತಿ ಉಂಟಾಗುತ್ತಿದೆ. ಮದ್ಯ ಮಾರಾಟ ನಿಷೇಧದಿಂದಾಗಿ ತಮಗೆ ಭಾರಿ ಹಿನ್ನಡೆಯಾಗಲಿದೆ. ವಾರಾಂತ್ಯದಲ್ಲಿ ಶೇ 60ರವರೆಗಿನ ಮದ್ಯ ಮಾರಾಟದಿಂದಾಗಿ ತಾವು ತಮ್ಮ ಲಾಭದ ಶೇ 40ರಷ್ಟನ್ನು ಪಡೆಯುತ್ತೇವೆ. ಆದರೆ, ಇಂತಹ ಪರಿಸ್ಥಿತಿಯಿಂದ ತೊಂದರೆ ಉಂಟಾಗುತ್ತದೆ ಎಂದು ರಾಜಧಾನಿ ಬೆಂಗಳೂರಿನ ರೆಸ್ಟೋಬಾರ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಪಬ್‌ಗಳು ಮತ್ತು ರೆಸ್ಟೋಬಾರ್‌ಗಳಲ್ಲಿ ಕನಿಷ್ಠ ಆಹಾರವನ್ನಾದರೂ ಮಾರಾಟ ಮಾಡಲು ಅವಕಾಶ ನೀಡುವಂತೆ ನಾವು ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೆ, ಅಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ.