ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಚಿತ್ರದುರ್ಗ:
ಯೂರಿಯಾ ಹಾಗೂ ಇನ್ನಿತರೆ ರಸಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ರಾಜ್ಯ ಜಾಗೃತ ಕೋಶ ವಿಭಾಗದ ಉಪ ಕೃಷಿ ನಿರ್ದೇಶಕರಾದ ಡಾ.ಜಾವೇದ ನಸೀಮಾ ಎಚ್ಚರಿಕೆ ನೀಡಿದರು.
ನಗರದ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಮಂಗಳವಾರ ಭೇಟಿ ನೀಡಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಮಾರಾಟಗಾರರ ಜೊತೆ ಮಾತನಾಡಿ ಎಚ್ಚರಿಕೆ ನೀಡಿದರು.
ರಸಗೊಬ್ಬರ ನಿಯಂತ್ರಣ ಆದೇಶದ ಮಾರ್ಗಸೂಚಿಗಳನ್ವಯ ಕೃಷಿ ಪರಿಕರಗಳನ್ನು ಮಾರಾಟ ಮಾಡಬೇಕು. ದರಪಟ್ಟಿಯನ್ನು ಎಲ್ಲರಿಗೂ ಕಾಣುವಂತೆ ಪ್ರದರ್ಶಿಸಬೇಕು ಮತ್ತು ಕೃಷಿ ಪರಿಕರಗಳನ್ನು ನಿಗಧಿತ ದರದನ್ವಯ ರಸೀದಿ ನೀಡಲು ಸೂಚಿಸಿದರು.
ಪ್ರಿನ್ಸಿಪಲ್ ಸರ್ಟಿಫಿಕೇಟ್ ಇಲ್ಲದೆ ಕೃಷಿ ಪರಿಕರಗಳನ್ನು ಮಾರಾಟ ಮಾಡುತ್ತಿದ್ದವರಿಗೆ ಮಾರಾಟ ತಡೆ ನೋಟೀಸ್ ಜಾರಿ ಮಾಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕರಾದ ಹುಲಿರಾಜ್, ಪ್ರಭಾಕರ್ ಮತ್ತು ಜಾಗೃತಕೋಶದ ಸಹಾಯಕ ಕೃಷಿ ನಿರ್ದೇಶಕರಾದ ಜೆ. ಅಶೋಕ್, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.