ಮೋಸ್ಟ್‌ ವಾಟೆಂಡ್‌ ಉಗ್ರ ಕೈಸರ್ ಫಾರೂಕ್ ಗುಂಡೇಟಿಗೆ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಕೈಸರ್ ಫಾರೂಕ್ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಮೋಸ್ಟ್ ವಾಂಟೆಡ್ ನಾಯಕರಲ್ಲಿ ಒಬ್ಬನಾಗಿದ್ದ ಕೈಸರ್ ಫಾರೂಕ್, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನ ನಿಕಟ ಸಹವರ್ತಿಯಾಗಿದ್ದ. ಹಲವು ಭಾರತ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದನು.

ಪೊಲೀಸ್ ಮೂಲಗಳ ಪ್ರಕಾರ, ಕರಾಚಿಯ ಬೀದಿಯಲ್ಲಿ ಇತರೆ ವ್ಯಕ್ತಿಗಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರ ಫಾರೂಕ್ ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!