Thursday, September 21, 2023

Latest Posts

CRIME| ಬೆಂಗಳೂರಿನಲ್ಲಿ ತಾಯಿ, ಮಗನ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಬಾಗಲಗುಂಟೆಯ ರವೀಂದ್ರ ನಗರದಲ್ಲಿ ವಾಸವಾಗಿರುವ ನವನೀತ (35) ಎಂಬ ಮಹಿಳೆ ಹಾಗೂ ಅವರ ಮಗ ಸೃಜನ್ (11) ಕೊಲೆಯದಾದವರು.

ನವನೀತ ಅವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದ್ದು, ಎಂಟು ವರ್ಷದ ಮಗನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ಇಬ್ಬರ ಶವ ಕೂಡ ಬೆಡ್‌ ಮೇಲೆ ಬಿದ್ದಿದ್ದ ಪರಿಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ.

ನವನಿತ ಅವರ ಪತಿಯಿಂದಲೇ ಈ ದುಷ್ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಸದ್ಯಕ್ಕೆ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!