ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳಿಯರು ಕಾಪಾಡಿದ್ದಾರೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.