August 10, 2026
Monday, August 10, 2026
spot_img

ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ, ಮಗು ಸಾ*ವು: ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

ಹೊಸದಿಗಂತ ವರದಿ ಸಿಂದಗಿ:

ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗು ಸಾವನ್ನಪ್ಪಿದ್ದು, ಈ ಇಬ್ಬರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

ಇಲ್ಲಿನ ವಿದ್ಯಾ ನಗರದ 4ನೇ ಕ್ರಾಸ್ ನಿವಾಸಿ ಮೈತ್ರಾ ರವಿಚಂದ್ರ ಸುಂಗಠಾಣ (26) ಮೃತ ದುರ್ದೈವಿ.

ಇದನ್ನೂ ಓದಿ:

ಮೈತ್ರಾ ಕಳೆದ ಫೆ.18 ರಂದು ಸಿಂದಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು, ಫೆ.18ರಂದು ಮಗುವಿಗೆ ಜನ್ಮ ನೀಡಿದ್ದರು. ಅತೀ ರಕ್ತ ಸ್ರಾವದಿಂದ ಬಳಲುತ್ತಿದ್ದ ಬಾಣಂತಿಗೆ, ಚಿಕಿತ್ಸೆ ನೀಡದೇ ಇದ್ದುದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಕುಟುಂಬಸ್ಥರು ದೂರುತ್ತಿದ್ದಾರೆ.

ಸಿಂದಗಿ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಹಾಗೂ ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !