ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಯಿ ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತೆ. ಆ ದೇವರ ಆಶೀರ್ವಾದ ಇರುವುದರಿಂದಲೇ ಇಷ್ಟು ವರ್ಷದಿಂದ ರಾಜಕೀಯದಲ್ಲಿ ಉಳಿದಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಮೇಲೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಸದಾ ಇರುತ್ತೆ. ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಇದರಿಂದ ಇಷ್ಟೊಂದು ಬಾರಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಸಿಕ್ಕಿದೆ. ಚಾಮುಂಡೇಶ್ವರಿ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತೆ. ಆ ದೇವರ ಆಶೀರ್ವಾದ ಇಲ್ಲ ಅನ್ನುವುದೇ ಇಲ್ಲ. ಆಶೀರ್ವಾದ ಇರುವುದರಿಂದಲೇ ಇಷ್ಟು ವರ್ಷದಿಂದ ರಾಜಕೀಯದಲ್ಲಿ ಉಳಿದಿರುವುದು ಅಂತ ತಿಳಿಸಿದ್ದಾರೆ.