ವಿದ್ಯುತ್ ತಂತಿ ತಗುಲಿ ತಾಯಿ,ಮಗು ಸಾವು: ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೊಟೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿದ್ಯುತ್ ತಂತಿ ತಗುಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಸರ್ಕಾರಕ್ಕೆ ನೋಟಿಸ್ ನೀಡಿದ್ದು, 6 ವಾರಗಳಲ್ಲಿ ಉತ್ತರ ನೀಡುವಂತೆ ತಿಳಿಸಿದೆ.

ಎರಡು ದಿನಗಳ ಹಿಂದೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ತಾಯಿ ಹಾಗೂ 9 ತಿಂಗಳ ಮಗು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಜೀವ ದಹನವಾಗಿದ್ದರು. ಘಟನೆಯಲ್ಲಿ ಮಹಿಳೆಯ ಪತಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!